ಕಲಬುರ್ಗಿ:- ದರ್ಗಾದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಹಿನ್ನೆಲೆ 6 ಮಂದಿ ಮುಸ್ಲಿಂರ ವಿರುದ್ಧ ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿFIR ದಾಖಲಾಗಿದೆ.
Advertisement
ರಾಷ್ಟ್ರೀಯ ಗೌರಕ್ಕೆ ಅವಮಾನ ತಡೆಗಟ್ಟುವ ಕಾಯ್ದೆ 1971 ಯು/ಎಸ್ 2 ಅಡಿಯಲ್ಲಿ ಮೊಹಮ್ಮದ್ ಅಫ್ಜಲುದ್ದೀನ್ ಜುನೈದಿ, ಮೊಹಮ್ಮದ್ ಕಿವಾಮೊದ್ದಿನ್ ಜುನೈದಿ, ತಾಹಿರ್ ಅಲ್ಲಾವುದ್ದಿನ್ ಜುನೈದಿ, ಫಕ್ರುದ್ದಿನ್ ಮಣಿಯಾಲ್, ರಿಜ್ವಾನ್ ಅಹ್ಮದ್ ಮತ್ತು ಮೌಲಾನ್ ಅಹ್ಮದ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆ ಹಿನ್ನೆಲೆ:-
ಶೇಖ್ ದರ್ಗಾದಲ್ಲಿ ಶುಕ್ರವಾರ ಜುನೈದಿ ಎಂಬುವರ ಹುಟ್ಟು ಹಬ್ಬ ಆಚರಣೆ ಮಾಡಲಾಗಿತ್ತು. ಹುಟ್ಟು ಹಬ್ಬ ಪ್ರಯುಕ್ತ ಸಾಮೂಹಿಕ ವಿವಾಹ ಆಯೋಜಿಸಲಾಗಿತ್ತು. ಈ ವೇಳೆ ಮುಸ್ಲಿಂ ಧ್ವಜದ ಕೆಳಗಡೆ ರಾಷ್ಟ್ರಧ್ವಜ ಇಟ್ಟು ಆರೋಹಣ ಮಾಡಲಾಗಿತ್ತು. ಈ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪ ಕೇಳಿಬಂದಿತ್ತು.