ಮೈಸೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲು!

0
Spread the love

ಮೈಸೂರು: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ ನೀಡಿದ ದೂರಿನ ಮೇರೆಗೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಸಿಎಂ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡದ ನಿವೇಶನ ಕ್ರಯಪತ್ರದ ಮುದ್ರಾಂಕ ಶುಲ್ಕದ ಬಗ್ಗೆ ಸ್ನೇಹಮಯಿ ಕೃಷ್ಣ ಆಕ್ಷೇಪ ವ್ಯಕ್ತಪಡಿಸಿದರು.

Advertisement

ಇದನ್ನು ಖಂಡಿಸಿದ ಲಕ್ಷ್ಮಣ್‌ ಅವರು ಸ್ನೇಹಮಯಿ ಕೃಷ್ಣ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ. ಸಿಎಂ ವಿರುದ್ಧ ಪ್ರತಿ ನಿತ್ಯ ಒಂದಲ್ಲೊಂದು ಆರೋಪ ಮಾಡಿ ಒತ್ತಡ ಹೇರುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಕ್ಷ್ಮಣ್‌ ದೂರು ನೀಡಿದ್ದರು. ದೂರು ನೀಡಿದ ಮರುದಿನವೇ ದೇವರಾಜ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಅದರಂತೆ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಆದರೆ ಸ್ನೇಹಮಯಿ ಕೃಷ್ಣರವರು ಲೋಕಾಯುಕ್ತ ತನಿಖೆ ಸರಿಯಾಗಿ ನಡೆಯುತ್ತಿಲ್ಲವೆಂದು ಮತ್ತು ತನಿಖಾಧಿಕಾರಿಯ ವಿರುದ್ಧ ಲೋಕಾಯುಕ್ತ ಎಡಿಜಿಪಿಗೆ ದೂರನ್ನು ನೀಡುವುದಲ್ಲದೆ ತನಿಖಾಧಿಕಾರಿಯವರಿಗೆ ದಿನನಿತ್ಯ ಬ್ಲಾಕ್​ಮೇಲ್ ಮತ್ತು ಒತ್ತಡ ಹೇರಲಾಗುತ್ತಿದೆ. ತನಿಖೆಯ ವರದಿಯನ್ನು ನ್ಯಾಯಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಇನ್ನೂ ಸಲ್ಲಿಲ್ಲ. ತನಿಖೆ ಇನ್ನು ವಿಚಾರಣೆ ಹಂತದಲ್ಲಿರುವಾಗ ತನಿಖೆ ಸರಿಯಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here