ನಿರ್ಮಲಾ ಸೀತಾರಾಮನ್, ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲು!

0
Spread the love

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರು. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸು ವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾ ಲಯ ಆದೇಶಿಸಿತ್ತು.

Advertisement

ಇದರ ಬೆನ್ನಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನಿರ್ಮಲಾ ಸೀತಾರಾಮನ್‌ ಸೇರಿ ಹಲವರು ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್‌ ಐಯ್ಯರ್‌ ದೂರು ನೀಡಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಒಟ್ಟು ಐವರ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ.

ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್‌ ಕುಮಾರ್‌ ಕಟೀಲ್‌ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ. ಐಪಿಸಿ ಸೆಕ್ಷನ್‌ 384 (ಸುಲಿಗೆ), 120b (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಕೇಸ್‌ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here