HomeKarnataka Newsಫುಟ್ ಪಾತ್ ತೆರವುಗೊಳಿಸಿದ ಜಾಗದಲ್ಲಿ ಮತ್ತೆ ವ್ಯಾಪಾರ ಮಾಡಿದ್ರೆ FIR: ಕೃಷ್ಣ ಬೈರೇಗೌಡ ಎಚ್ಚರಿಕೆ

ಫುಟ್ ಪಾತ್ ತೆರವುಗೊಳಿಸಿದ ಜಾಗದಲ್ಲಿ ಮತ್ತೆ ವ್ಯಾಪಾರ ಮಾಡಿದ್ರೆ FIR: ಕೃಷ್ಣ ಬೈರೇಗೌಡ ಎಚ್ಚರಿಕೆ

For Dai;y Updates Join Our whatsapp Group

ಬೆಂಗಳೂರು: ನಗರದಲ್ಲಿ ಫುಟ್‌ಪಾತ್‌ಗಳನ್ನು ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ (GBA) ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತೆರವುಗೊಳಿಸಿದ ಸ್ಥಳಗಳಲ್ಲಿ ಮತ್ತೆ ವ್ಯಾಪಾರ ನಡೆಸುವ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಸಿ, ಅಗತ್ಯವಿದ್ದಲ್ಲಿ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ.

ಬೀದಿಬದಿ ವ್ಯಾಪಾರಿಗಳಿಂದ ಪಾದಚಾರಿ ಮಾರ್ಗಗಳು ಮತ್ತೆ ಒತ್ತುವರಿಯಾಗದಂತೆ ನಿರಂತರ ನಿಗಾ ವಹಿಸಬೇಕು. ತೆರವುಗೊಳಿಸಿದ ಫುಟ್‌ಪಾತ್‌ಗಳಲ್ಲಿ ಮರುಒತ್ತುವರಿ ಕಂಡುಬಂದರೆ ಕೂಡಲೇ ಸ್ಥಳದಲ್ಲೇ ಕ್ರಮ ಕೈಗೊಳ್ಳುವ ವ್ಯವಸ್ಥೆ ರೂಪಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.

ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 1,373.32 ಕಿಲೋಮೀಟರ್ ರಸ್ತೆಯಲ್ಲಿನ ಒತ್ತುವರಿ ತೆರವುಗೊಳಿಸಿ, ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅಧಿಕಾರಿಗಳ ಕಾರ್ಯವನ್ನು ಕೃಷ್ಣ ಬೈರೇಗೌಡ ಶ್ಲಾಘಿಸಿದ್ದಾರೆ.

ಆದರೆ, ನಗರದ ಹಲವು ಪ್ರದೇಶಗಳಲ್ಲಿ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ ಬಳಿಕವೂ ಕೆಲವೆಡೆ ಮತ್ತೆ ಒತ್ತುವರಿ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ. ಇದು ಕಳವಳಕಾರಿ ವಿಚಾರವಾಗಿದ್ದು, ಮರುಒತ್ತುವರಿ ತಡೆಯಲು ಪರಿಣಾಮಕಾರಿ ನಿಗಾ ವ್ಯವಸ್ಥೆ ಅಗತ್ಯ ಎಂದು ಸಚಿವರು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿ ನಗರಪಾಲಿಕೆ ವ್ಯಾಪ್ತಿಯಲ್ಲಿ ಪೊಲೀಸ್ ಮತ್ತು ಪಾಲಿಕೆ ಅಧಿಕಾರಿಗಳ ಸಮನ್ವಯದೊಂದಿಗೆ ಜಂಟಿ ಟಾಸ್ಕ್‌ಫೋರ್ಸ್ ರಚಿಸುವಂತೆ ಸೂಚಿಸಲಾಗಿದೆ. ತೆರವುಗೊಳಿಸಿರುವ ಪಾದಚಾರಿ ಮಾರ್ಗಗಳಲ್ಲಿ ನಿಯಮಿತ ಹಾಗೂ ಅನಿರೀಕ್ಷಿತ ಪರಿಶೀಲನೆ ನಡೆಸಬೇಕು. ಮರುಒತ್ತುವರಿ ಕಂಡುಬಂದ ಕೂಡಲೇ ಸ್ಥಳದಲ್ಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇದರ ಜೊತೆಗೆ ಮರುಒತ್ತುವರಿ ಪ್ರಕರಣಗಳನ್ನು ತಕ್ಷಣ ಗುರುತಿಸಿ, ಸ್ಥಳದ ಫೋಟೋ ಹಾಗೂ ಜಿಯೋ-ಟ್ಯಾಗ್ ಮಾಹಿತಿಯೊಂದಿಗೆ ವರದಿ ಮಾಡುವ ವ್ಯವಸ್ಥೆ ರೂಪಿಸುವಂತೆ ಸೂಚಿಸಲಾಗಿದೆ. ಮಾರ್ಷಲ್‌ಗಳು ಮತ್ತು ಬೀಟ್ ಪೊಲೀಸ್ ಸಿಬ್ಬಂದಿ ಜಂಟಿಯಾಗಿ ನಿಯಮಿತವಾಗಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ.

ಫುಟ್‌ಪಾತ್ ತೆರವುಗೊಳಿಸಿದ ಬಳಿಕ ಮತ್ತೆ ಅದೇ ಜಾಗದಲ್ಲಿ ವ್ಯಾಪಾರ ನಡೆಸಿ ಒತ್ತುವರಿ ಮಾಡಿದರೆ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸುವುದರ ಜೊತೆಗೆ ಎಫ್‌ಐಆರ್ ದಾಖಲಿಸುವ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿಯಾಗದಂತೆ ಮರುಒತ್ತುವರಿ ತಡೆಗೆ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img