ಬೆಂಗಳೂರು:- ರೌಡಿಶೀಟರ್ ಶಿವಪ್ರಕಾಶ್ ಕೊಲೆ ಕೇಸ್ ನಲ್ಲಿ ತಮ್ಮ ಮೇಲೆ ದಾಖಲಾಗಿರುವ FIR ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೊಲೆಯಾದವನು ಮತ್ತು ಕೊಲೆ ಮಾಡಿದ ಆರೋಪಿಗಳು ನನಗೆ ಗೊತ್ತಿಲ್ಲ. ದೂರು ನೀಡಿದವರು ನನಗೆ ಗೊತ್ತಿಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್‌ಎಆರ್ ದಾಖಲಿಸಬಹುದೇ ಎಂದು ಪ್ರಶ್ನಿಸಿದರು.
ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ನನಗೆ ಈ ವಿಚಾರ ಗೊತ್ತಾಯಿತು. ನನಗೆ ಸಂಬಂಧ ಇಲ್ಲದ ಪ್ರಕರಣದಲ್ಲಿ ನನ್ನ ಹೆಸರು ಬಂದಿದೆ. ಎಫ್‌ಐಆರ್‌ನಿಂದ ನನ್ನ ಹೆಸರು ತೆಗೆಯಲು ನಾನು ಕಾನೂನು ಸಮರ ಮಾಡುತ್ತೇನೆ. ಗೃಹ ಸಚಿವ ಪರಮೇಶ್ವರ್ ಅವರಿಗೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಘಟನೆ ವಿವರ:
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದೆ. ಮೃತನ ತಾಯಿ ನೀಡಿದ ದೂರಿನ ಹಿನ್ನೆಲೆ ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ರನ್ನು A5 ಆರೋಪಿಯನ್ನಾಗಿ ಮಾಡಲಾಗಿದೆ.
ಜಮೀನು ವಿಚಾರಕ್ಕೆ ರೌಡಿಶೀಟರ್ ಶಿವಪ್ರಕಾಶ್ ಹಾಗೂ ಭೈರತಿ ಬಸವರಾಜ್, ಬೆಂಬಲಿಗರ ನಡುವೆ ಗಲಾಟೆ ಆಗಿತ್ತು ಎನ್ನಲಾಗಿದೆ. ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ.