ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಯನ್ನು ಎತ್ತಿ ಹಿಡಿದ ಹೈಕೋರ್ಟ್ ಆದೇಶದ ಬೆನ್ನಲ್ಲೇ ಪಾರದರ್ಶಕತೆ ನಿಟ್ಟಿನಲ್ಲಿ ಸಿಬಿಐ ತನಿಖೆಗೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ. ಇದರ ನಡುವೆ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್‌ಪಿ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ. ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್ಐಆರ್ನಲ್ಲಿ ಸಿಎಂ ಸಿದ್ದರಾಮಯ್ಯ A1 ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಎಫ್ಐಆರ್ ದಾಖಲಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿದ ದೂರುದಾರ ಸ್ನೇಹಮಯಿ ಕೃಷ್ಣ, ಎಸ್‌ಪಿ ವಿರುದ್ಧವೇ ದೂರು ನೀಡಿದ್ದಾರೆ.