ತುಮಕೂರು:- ಅನ್ಯ ಧರ್ಮಿಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ BJP ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ FIR ದಾಖಲಾಗಿದೆ.
Advertisement
ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರು, ಸಾಮಾಜಿಕ ಜಾಲತಾಣದಲ್ಲಿ ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದೂರು ಕೊಡಲಾಗಿದೆ.
ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಎಂದು ದೂರಲಾಗಿದೆ.
ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದಾರೆ. ಅದರಂತೆ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.