ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್‌ ಸಿಂಹ ವಿರುದ್ಧ FIR ದಾಖಲು

0
Spread the love

ಮೈಸೂರು: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Advertisement

ಮೈಸೂರು ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಫೆ.10ರಂದು ಮುಸ್ಲಿಂ ಯುವಕರ ಗುಂಪು ದಾಂಧಲೆ ನಡೆಸಿತ್ತು. ಈ ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್‌ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.


Spread the love

LEAVE A REPLY

Please enter your comment!
Please enter your name here