HomeEntertainmentನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌ ದಾಖಲು

ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌ ದಾಖಲು

For Dai;y Updates Join Our whatsapp Group

Spread the love

ಬೆಂಗಳೂರು: ಡಾ. ರಾಜ್‌ಕುಮಾರ್ ಸಮಾಧಿ ಜಾಗದ ವಿವಾದ ಇದೀಗ ಕಾನೂನು ಹಂತ ತಲುಪಿದೆ. ನಟ ಚೇತನ್ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ನಿರ್ಮಾಪಕ ಸಾ.ರಾ ಗೋವಿಂದು ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಈ ಪ್ರಕರಣದಲ್ಲಿ ಬೆದರಿಕೆ, ಮನೆ ಮುಂದೆ ಗಲಾಟೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪಗಳು ಸೇರಿವೆ.

ಚೇತನ್ ಅವರ ಪ್ರಕಾರ, ಸಾಮಾಜಿಕ ಜಾಲತಾಣದ ಪೋಸ್ಟ್ ಪ್ರಶ್ನಿಸಿ ಕೆಲವರು ಮನೆಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. “ಸಾ.ರಾ ಗೋವಿಂದು ಅವರ ನಡೆ ದುರಹಂಕಾರ ಹಾಗೂ ಗೂಂಡಾಗಿರಿ ತೋರಿಸುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹಲವು ಸಂಘಟನೆಗಳು ಸೇರಿ ದಾಖಲೆ ಸಮೇತ ದೂರು ಸಲ್ಲಿಸಿರುವುದಾಗಿ ಚೇತನ್ ತಿಳಿಸಿದ್ದಾರೆ.

ಘಟನೆ ಇದೀಗ ಸಿನಿ ವಲಯದ ವಿವಾದವನ್ನು ಕಾನೂನು ಹೋರಾಟದ ಹಂತಕ್ಕೆ ತಳ್ಳಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!