ಬಳ್ಳಾರಿ:- ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಅಮಲಾಪುರ ಗ್ರಾಮದಲ್ಲಿ ಕುರಿ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾದ ಘಟನೆ ಜರುಗಿದೆ.
Advertisement
ರೈತ ಅಗಸರ ಶೇಖರಪ್ಪ ಎಂಬುವವರಿಗೆ ಈ ಕುರಿಗಳು ಸೇರಿದ್ದು ಎನ್ನಲಾಗಿದೆ. ಮೊದಲು ಕಣಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಣದಿಂದ ಪಕ್ಕದಲ್ಲಿದ್ದ ಕುರಿಗಳನ್ನು ಕಟ್ಟಿ ಹಾಕಿದ್ದ ಶೆಡ್‌ಗೆ ಸಹ ಬೆಂಕಿ ತಗುಲಿದೆ. ಘಟನೆ ವೇಳೆ ಯಾರು ಇಲ್ಲದೇ ಇದ್ದಿದ್ದರಿಂದ ಎಲ್ಲಾ ಕುರಿಗಳು ಸಾವನ್ನಪ್ಪಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದರೂ ಕುರಿಗಳನ್ನು ಬದುಕಿಸಲು ಸಾಧ್ಯವಾಗಿಲ್ಲ. 4 ಲಕ್ಷ ರೂ.ಗೂ ಹೆಚ್ಚು ಬೆಲೆ ಬಾಳುವ ಕುರಿಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಅಲ್ಲದೇ ರೈತನಿಗೆ ಸೂಕ್ತ ಪರಿಹಾರ ಕೊಡುವಂತೆ ಆಗ್ರಹ ಕೇಳಿ ಬಂದಿದೆ.