ರಾಂಜಿ:- ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಮೂವರು ಮಕ್ಕಳು ಸೇರಿ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್‌ನ ಗರ್ವಾದಲ್ಲಿ ಜರುಗಿದೆ.
ಘಟನೆ ಕುರಿತು ಮಾತನಾಡಿದ ರಂಕಾ ಎಸ್‌ಡಿಪಿಒ ರೋಹಿತ್ ರಂಜನ್ ಸಿಂಗ್, ಇಂದು ಮಧ್ಯಾಹ್ನ 12.30ರ ಸುಮಾರಿಗೆ ಅಂಗಡಿಯಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಐವರು ಮೃತಪಟ್ಟಿದ್ದಾರೆ. ಕೂಡಲೇ ಗಾಯಾಳುಗಳನ್ನು ಛತ್ತೀಸ್‌ಗಢದ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ತಿಳಿಸಿದರು.
ಇನ್ನೂ ಮುಖ್ಯಮಂತ್ರಿ ಹೇಮಂತ್ ಸೊರೆನ್ ಘಟನೆಯ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.



