ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–1 ಬಿ ಒಳಗೆ ಇಂದು ಸಂಜೆ ಬೆಂಕಿ ಅವಘಡ ಸಂಭವಿಸಿದೆ.
ಟರ್ಮಿನಲ್‌ನ ನೆಲ ಮಹಡಿಯಲ್ಲಿ ಇರುವ ಕೇಬಲ್ ಟ್ರೇಗಳು ಮತ್ತು ಸ್ವಿಚ್ ಬಾಕ್ಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ತಿಳಿಸಿದ್ದಾರೆ.
ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ಅಗ್ನಿಶಾಮಕ ದಳ, ಪೊಲೀಸರು ಹಾಗೂ ವಾರ್ಡ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ತ್ವರಿತ ಕಾರ್ಯಾಚರಣೆಯಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಬೆಂಕಿ ಟರ್ಮಿನಲ್‌ನ ನೆಲ ಮಹಡಿಗೆ ಮಾತ್ರ ಸೀಮಿತವಾಗಿದ್ದು, ಹೆಚ್ಚಿನ ಹಾನಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಈ ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರಲ್ಲಿ ಆತಂಕ ಉಂಟಾದರೂ, ಪರಿಸ್ಥಿತಿ ಇದೀಗ ನಿಯಂತ್ರಣದಲ್ಲಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



