ಹೈದರಾಬಾದ್:- ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ್ ಅವರ ಕಿರಿಯ ಮಗ ಓದುತ್ತಿದ್ದ ಸಿಂಗಾಪುರದಲ್ಲಿನ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅವಘಡದಲ್ಲಿ ಪವನ್ ಕಲ್ಯಾಣ್ ಮಗ ಮಾರ್ಕ್ ಶಂಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವಘಡದಲ್ಲಿ ಶಂಕರ್ ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿದ್ದರಿಂದ ತೀವ್ರ ಉಸಿರಾಟದ ತೊಂದರೆ ಆಗಿದೆ. ಪ್ರಸ್ತುತವಾಗಿ ಸಿಂಗಾಪುರದ ಆಸ್ಪತ್ರೆಯಲ್ಲಿ ಪವನ್ ಕಲ್ಯಾಣ್ ಅವರ ಮಗ ಮಾರ್ಕ್ ಶಂಕರ್ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ಡಿಸಿಎಂ ಪವನ್ ಕಲ್ಯಾಣ್ ಅವರು ಸಿಂಗಾಪುರ ಪ್ರಯಾಣ ಬೆಳೆಸಿದ್ದಾರೆ.



