HomeGadag Newsಬೆಂಕಿ ಅವಘಡ: ಸುಟ್ಟು ಕರಕಲಾದ ಬೇಕರಿ, 25 ಲಕ್ಷಕ್ಕೂ ಹೆಚ್ಚು ಹಾನಿ!

ಬೆಂಕಿ ಅವಘಡ: ಸುಟ್ಟು ಕರಕಲಾದ ಬೇಕರಿ, 25 ಲಕ್ಷಕ್ಕೂ ಹೆಚ್ಚು ಹಾನಿ!

For Dai;y Updates Join Our whatsapp Group

Spread the love

ಗದಗ:- ಬೆಂಕಿ ಅವಘಡದಿಂದ ಬೇಕರಿ ಒಂದು ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ಜರುಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ.

ಪಟ್ಟಣದ ಬಸ್ ನಿಲ್ದಾಣದ ಎದುರಿನ ನ್ಯೂ ಮಹಾಂತೇಶ ಬೇಕರಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಪಾರ ಮೌಲ್ಯದ ತಿನಿಸು ಪದಾರ್ಥಗಳು ಸುಟ್ಟು‌ ಭಸ್ಮವಾಗಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಘಟನೆಯಲ್ಲಿ ಅಂದಾಜು ಇಪ್ಪತ್ತೈದು ಲಕ್ಷಕ್ಕೂ ಹೆಚ್ಚು ಹಾನಿ ಆಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.

ಸ್ಥಳಕ್ಕೆ ತಹಶೀಲ್ದಾರ ಪಿ.ಎಸ್.ಯರ್ರಿಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!