ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಅವಘಡ: ಐವರಿಗೆ ಗಾಯ – ಆಸ್ಪತ್ರೆಗೆ ದಾಖಲು

0
Spread the love

ಮೈಸೂರು: ಮೈಸೂರಿನ ಹುಣಸೂರು ನಗರದ ಕಲ್ಕುಣಿಕೆಯ ಕುರ್ಜನ್ ಬೀದಿಯ ವಠಾರದಲ್ಲಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಐದು ಜನರಿಗೆ ಗಾಯಗಳಾದ ಘಟನೆ ನಡೆದಿದೆ. ನಿಂಗರಾಜು ಎಂಬವರ ಮನೆಯಲ್ಲಿ ಘಟನೆ ನಡೆದಿದ್ದು,

Advertisement

ಘಟನೆಯಲ್ಲಿ ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಂಗರಾಜುರವರ ಮನೆಯಲ್ಲಿ ಸಿಲಿಂಡರ್ ಬದಲಾಯಿಸುವ ವೇಳೆ ಗ್ಯಾಸ್ ಸೋರಿಕೆಯಾಗಿ ದಂಪತಿಗೆ ಬೆಂಕಿ ಹತ್ತಿಕೊಂಡಿದೆ. ಜೋರಾದ ಶಬ್ದ ಕೇಳಿದ ಪಕ್ಕದ ಮನೆಯವರಾದ ರಾಣಿಯಮ್ಮ,

ಶೀಲ, ನಾಗಮ್ಮರವರು ನೋಡಲು ಹೋಗುತ್ತಿದ್ದಂತೆ ಅವರ ಬಟ್ಟೆಗಳಿಗೆ ಬೆಂಕಿ ಹತ್ತಿಕೊಂಡಿದೆ. ಘಟನೆ ಸಂಬಂಧ ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here