ಬೆಂಗಳೂರು:- ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಪುಷ್ಕರ್ ಕುಮಾರ್ ಹಾಗು ಜ್ಯೋತಿಕುಮಾರಿ ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ಅಪಾರ್ಟ್ ಮೆಂಟ್ ಸೆಲ್ಲರ್‌ನ 10*10 ಅಳತೆಯ ರೂಮ್‌ನಲ್ಲಿ ವಾಸ ಮಾಡ್ತಿದ್ದ ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಗು ಸಾವನ್ನಪ್ಪಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.