ರಾಯಚೂರು:– ಇಲ್ಲಿನ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
Advertisement
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮೇವು ಸಂಗ್ರಹಿಸಿಟ್ಟಿದ್ದ ಮೇವಿನ ಗೋದಾಮಿನಲ್ಲಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಮೇವು ಬೆಂಕಿಗಾಹುತಿಯಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿ ನೂರಾರು ಗೋವುಗಳನ್ನು ಹೊರಗೆ ಬಿಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಆಂಧ್ರಪ್ರದೇಶದ ಎಮ್ಮಿಗನೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಗೋಶಾಲೆಯ ಗೋವುಗಳು ಸುರಕ್ಷಿತವಾಗಿವೆ. ಮಂತ್ರಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.