ಬೆಂಕಿ ಅವಘಡ: ರಸ್ತೆ ಬದಿ ಹಾಕಿದ್ದ ಫರ್ನಿಚರ್ ಅಂಗಡಿ ಸುಟ್ಟು ಕರಕಲು!

0
Spread the love

ಕಲಬುರಗಿ:- ಜಿಲ್ಲೆಯ ವಸಂತ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ರಸ್ತೆ ಬದಿ ಹಾಕಲಾಗಿದ್ದ ಫರ್ನಿಚರ್ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.

Advertisement

ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಹಳೆ ಫರ್ನಿಚರ್ , ಜೊತೆಗೆ ಕಾರು ಕೂಡ ಬೆಂಕಿಗಾಹುತಿಯಾಗಿದೆ. ಸ್ಥಳೀಯರ ಮಾಹಿತಿ ಆಧರಿಸಿ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ.

ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here