ಅಗ್ನಿ ಅವಘಡ: ಫರ್ನಿಚರ್ ಶಾಪ್‍ನಲ್ಲಿ 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

0
Spread the love

ಬೆಂಗಳೂರು:- ಭಾರೀ ಅಗ್ನಿ ಅವಘಡದಿಂದ 5 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಮಲ್ಲೇಶ್ವರಂನ ಪೈಪ್ ಲೈನ್ ರೋಡ್‍ನಲ್ಲಿರುವ ಫರ್ನಿಚರ್ ಶಾಪ್ ಒಂದರಲ್ಲಿ ಜರುಗಿದೆ.

Advertisement

ರಾತ್ರಿ 2:30ರ ಸುಮಾರಿಗೆ ಈ ಘಟನೆ ಜರುಗಿದ್ದು, ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ ಬೆಂಕಿ ಅಕ್ಕಪಕ್ಕದ ಅಪಾರ್ಟ್‍ಮೆಂಟ್‍ನ 3 ಮನೆಗಳಿಗೂ ಆವರಿಸಿದೆ. 13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here