ರಾಮನಗರ:- ಇಲ್ಲಿನ ವಡೇರಹಳ್ಳಿ ಗ್ರಾಮದಲ್ಲಿ ಮನೆಯೊಂದು ಹೊತ್ತಿ ಉರಿದಿದ್ದು, ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.
Advertisement
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ. ಗುರು ಎಂಬುವರಿಗೆ ಸೇರಿದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಎಸಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ನೋಡನೋಡುತ್ತಿದ್ದಂತೆ ಇಡೀ ಮನೆಗೆ ಬೆಂಕಿ ಆವರಿಸಿ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟುಕರಕಲಾಗಿವೆ.
ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.