ಬೆಂಗಳೂರು:– ನಗರದ ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
Advertisement
ಅವಘಡದಲ್ಲಿ 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿವೆ. ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್ ಹೀಟ್ ಆಗಿದ್ದು, ಪರಿಣಾಮ ಅಲ್ಲಿದ್ದ ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಜೊತೆಗೆ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಆರು ಸಿಲಿಂಡರ್‌ಗಳ ಗ್ಯಾಸ್ ಸೋರಿಕೆಯಾಗಿದ್ದು, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ.
ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜೊತೆಗೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.