ಹಿಂದಿಯ ಜನಪ್ರಿಯ “ಅನುಪಮಾ” ಸೀರಿಯಲ್ ಸೆಟ್ ನಲ್ಲಿ ಬೆಂಕಿ ಅವಘಡ!

0
Spread the love

ಮುಂಬೈನ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದ್ದ ಹಿಂದಿಯ ಜನಪ್ರಿಯ ಧಾರಾವಾಹಿ ‘ಅನುಪಮಾ’ ಸೀರಿಯಲ್ ಶೂಟಿಂಗ್ ಸೆಟ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಬೆಂಕಿ ಹೊತ್ತಿಕೊಂಡಿದೆ.

Advertisement

ವಿದ್ಯುತ್ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಆಗಿಲ್ಲ. ಘಟನೆಯ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಸೋಮವಾರದ ಶೂಟಿಂಗ್ ಆರಂಭ ಆಗುವುದಕ್ಕೂ ಮುನ್ನವೇ ಈ ದುರಂತ ಸಂಭವಿಸಿದೆ. ಈ ವೇಳೆ ಸೆಟ್​ನಲ್ಲಿ ಕಲಾವಿದರು ಯಾರೂ ಇರಲಿಲ್ಲ. ಆ ಕಾರಣದಿಂದ ಜೀವ ಹಾನಿ ಆಗುವುದು ತಪ್ಪಿದೆ. ಇಡೀ ಸ್ಟುಡಿಯೋಗೆ ಬೆಂಕಿ ಹೊತ್ತಿಕೊಂಡಿರುವ ಭಯಾನಕ ವಿಡಿಯೋ ವೈರಲ್ ಆಗಿದೆ.

‘ಅನುಪಮಾ’ ಧಾರಾವಾಹಿ ನಿರ್ಮಾಪಕರು ಮತ್ತು ವಾಹಿನಿಯವರು ಸೂಕ್ತ ಭದ್ರತಾ ಕ್ರಮ ತೆಗೆದುಕೊಳ್ಳದೇ ಇರುವುದೇ ಈ ಅವಘಡಕ್ಕೆ ಕಾರಣ ಎಂದು ಆರೋಪಿಸಲಾಗುತ್ತಿದೆ. ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟವು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.


Spread the love

LEAVE A REPLY

Please enter your comment!
Please enter your name here