ದೇವನಹಳ್ಳಿ:- ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೂದಿಗೆರೆ ಗ್ರಾಮದ ಮಂಚಪ್ಪನಹಳ್ಳಿ ಗೇಟ್ ಬಳಿ ಜರುಗಿದೆ. ವೋಕ್ಸ್ ವ್ಯಾಗನ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲೆಗೆಗೆ ಕಾರು ಸುಟ್ಟು ಕರಕಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಇಳಿದು ಚಾಲಕ ಹೋಗಿದ್ದಾನೆ. ಕಾಡುಗೋಡಿಯಿಂದ ದೊಡ್ಡಬಳ್ಳಾಪುರದ ಕಡೆ ತೆರಳುತ್ತಿದ್ದ KA53ME3645 ಕಾರು ಇದಾಗಿದ್ದು, ದೊಡ್ಡಬಳ್ಳಾಪುರ ದ ಲೋಕೇಶ್ ಎಂಬುವವರಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಕಾಂಕ್ರಿಟ್ ಮಿಕ್ಸರ್ ಲಾರಿಯಲ್ಲಿ ನೀರಿನಿಂದ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬೆಂಕಿ ನಂದಿಸಿದ ನಂತ್ರ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದಿದೆ. ಇನ್ನೂ ಘಟನೆಯಿಂದ ಕೆಲ ಕಾಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪರ್ಯಾಯ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.