ಅಗ್ನಿ ಅವಘಡ: ವುಡ್‌ ಫ್ಯಾಕ್ಟರಿಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿ!

0
Spread the love

ಬೆಂಗಳೂರು:- ವುಡ್‌ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ನಲ್ಲಿ ಜರುಗಿದೆ.

Advertisement

ಆನೇಕಲ್ ನ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್‌ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದವು.

ಎಕರೆಗಟ್ಟಲೆ ಪ್ರದೇಶದಲ್ಲಿ ಕಾರ್ಖಾನೆ ಇದೆ. ಹೆದ್ದಾರಿಗೆ ಹೊಂದಿಕೊಂಡಿರುವ ಹಿನ್ನೆಲೆ ಆತಂಕ ಮೂಡಿಸಿದೆ. ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಮೂರು ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ ನಡೆಸಲಾಯಿತು.

ಆಶೀರ್ವಾದ್ ಕಂಪನಿಯವರು ಹತ್ತು ಕಡೆಗಳಲ್ಲಿ ಬೆಂಕಿ ಆರಿಸಲು ಸಹಕರಿಸಿದರು. ಸಿಬ್ಬಂದಿಯು ಹತ್ತು ಪೈಪ್‌ ಮೂಲಕ ಪಕ್ಕದ ‌ಕಂಪನಿಯ ಬೆಂಕಿ ಆರಿಸುತ್ತಿದ್ದಾರೆ. ಸದ್ಯ ಒಳಗಡೆ ಯಾರೂ ಇಲ್ಲ ಎನ್ನುವ ಮಾಹಿತಿ ಸಿಕ್ಕಿದೆ.

ಹರ್ಷದ್ ಪಟೇಲ್ ಎಂವವರಿಗೆ ಸೇರಿದ ಕಾರ್ಖಾನೆ ಇದ್ದಾಗಿದ್ದು, ಸುಮಾರು ಐದು ಕೋಟಿಗೂ ಹೆಚ್ಚು ಬೆಲೆ‌ ಬಾಳುವ ವುಡ್ ಬೆಂಕಿಗೆ ಆಹುತಿಯಾಗಿದೆ.


Spread the love

LEAVE A REPLY

Please enter your comment!
Please enter your name here