ರಾಯಚೂರು :- ನಡುರಸ್ತೆಯಲ್ಲೇ ಬೆಂಕಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಜರುಗಿದೆ.
Advertisement
ಚಲಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಟ್ರಕ್ ಇಂಜಿನ್‌ನಲ್ಲಿ ಬಿಸಿ ಹೆಚ್ಚಾಗಿದ್ದು ಅತಿಯಾದ ಶಾಖದಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಬೆಂಕಿ ಕಾಣಿಸಿಕೊಂಡಿದ್ದೆ ತಡ ಟ್ರಕ್ ಬಿಟ್ಟು ಚಾಲಕ ಮತ್ತು ಕ್ಲೀನರ್ ಕೆಳಗಡೆ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಟ್ರಕ್‌ನ ಮುಂಭಾಗ ಸುಟ್ಟು ಕರಕಲಾಗಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ. ಹೀಗಾಗಿ ಟ್ರಕ್‌ನ ಇಂಜಿನ್ ಮುಂಭಾಗ ಮಾತ್ರ ಸುಟ್ಟು ಕರಕಲಾಗಿದೆ.