ಬೆಂಗಳೂರು:- ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.
Advertisement
ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ರೋಗಿಗಳನ್ನ ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ. ಡ್ಯೂಟಿ ಡಾಕ್ಟರ್ ದಿವ್ಯಾ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.