ರಾಯಚೂರು:- ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಗರದ ಹೊರವಲಯದ ಕೆಐಎಡಿಬಿ ಗ್ರೋತ್ ಸೆಂಟರ್ ಬಳಿಯ ಕಾಟನ್ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮವಾಗಿರುವ ಘಟನೆ ಜರುಗಿದೆ.
ರಾಯಚೂರಿನ ಹೈದ್ರಾಬಾದ್ ರಸ್ತೆಯಲ್ಲಿರುವ ಶ್ರೀಶೈಲ ಕಾಟನ್ ಮಿಲ್‌ನಲ್ಲಿ ಈ ಘಟನೆ ಜರುಗಿದ್ದು, ಇದು ನಗರದ ಪ್ರತಾಪ್ ರೆಡ್ಡಿ ಎಂಬುವವರಿಗೆ ಸೇರಿದ್ದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹತ್ತಿ, ಹರಳೆ, ಹತ್ತಿ ಕಾಳು ಸುಟ್ಟು ಬೂದಿಯಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪುರ ಸಮೀಪದಲ್ಲಿರುವ ಕಾಟನ್ ಮಿಲ್ ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿತ್ತು.



