ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ; ಲಕ್ಷಾಂತರ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ!

0
Spread the love

ಕೋಲಾರ:- ಕೋಲಾರದ ಎಂ.ಜಿ.ರಸ್ತೆಯಲ್ಲಿರುವ ಬ್ರಾಂಡೆಡ್ ಫ್ಯಾಕ್ಟರಿ ಅಂಗಡಿಗೆ ಬೆಂಕಿ ಬಿದ್ದು ಅಂಗಡಿಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿದೆ.

Advertisement

ಬಟ್ಟೆ ವ್ಯಾಪಾರಿ ಹಾಗೂ ಮಾಲೀಕ ಇಕ್ರಂ ಪಾಷಾ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 20ರಿಂದ 25 ಲಕ್ಷ ರೂ. ಮೌಲ್ಯದ ಬಟ್ಟೆಗಳು ಹಾಗೂ ಕೆಲ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.

ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಬೆಂಕಿ ಧಗಧಗವೆಂದು ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಪಕ್ಕದ ಕಟ್ಟಡಗಳಿಗೆ ಆವರಿಸುವ ಮೂಲಕ ಆತಂಕ ಮನೆಮಾಡಿತ್ತು. ಅಲ್ಲದೆ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಕೆಲ ಕಾಲ ಹರಸಾಹಸ ಪಡಬೇಕಾಗಿತ್ತು. ಇನ್ನು ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here