ಧಾರವಾಡ: ಶಾರ್ಟ್ ಸರ್ಕ್ಯೂಟ್ನಿಂದ ಸ್ಟೀಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡದ ಸವದತ್ತಿ ರಸ್ತೆಯಲ್ಲಿ ನಡೆದಿದೆ.
ಸವದತ್ತಿ ರಸ್ತೆಯಲ್ಲಿರುವ ಲಕ್ಷ್ಮೀ ಸ್ಟೀಲ್ ಟ್ರೇಡರ್ಸ್ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಭಾನುವಾರ ರಾತ್ರಿ ವ್ಯಾಪಾರ ಮುಗಿಸಿದ ಅಂಗಡಿ ಮಾಲೀಕರು, ಅಂದಿನ ವಹಿವಾಟಿನ ಹಣವನ್ನು ಅಂಗಡಿಯಲ್ಲೇ ಇಟ್ಟು ಬೀಗ ಹಾಕಿಕೊಂಡು ಮನೆಗೆ ತೆರಳಿದ್ದರು.
ಈ ವೇಳೆ ಅಂಗಡಿಯೊಳಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಂಗಡಿಯಾದ್ಯಂತ ವ್ಯಾಪಿಸಿದೆ. ಪರಿಣಾಮ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಧಾರವಾಡ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



