ಬೆಂಗಳೂರು: ಚಲಿಸುತ್ತಿದ್ದ ವೇಳೆ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು –ಅನಂತರಪುರ ಹೈವೇಯಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರೀನ್ ಲೈನ್ ಟ್ರಾವೆಲ್ಸ್ ಕಂಪನಿಗೆ ಸೇರಿದ ಈ ಬಸ್ ಬೆಂಗಳೂರಿನಿಂದ ಅನಂತಪುರ ಹೈವೇ ಮೂಲಕ ರಾಯಚೂರಿಗೆ ತೆರಳುತ್ತಿದ್ದಾಗ, ಟಯರ್ ಬ್ಲಾಸ್ಟ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನೂ ಬಿಟ್ಟು ಬಸ್‌ನಿಂದ ಜಿಗಿದಿದ್ದಾರೆ.
ಹೀಗಾಗಿ ಪ್ರಯಾಣಿರ ಸಂಪೂರ್ಣ ಲಗೇಜ್‌ಗಳು ಬೆಂಕಿಗೆ ಆಹುತಿಯಾಗಿದೆ. ವಿದ್ಯಾರ್ಥಿಗಳ ಪ್ರಮಾಣ ಪತ್ರ, ದುಬಾರಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸದ್ಯ ಪ್ರಯಾಣಿಕರು ಸೇಫ್ ಆಗಿದ್ದರೂ, ಅವರ ಬಳಿಯಿದ್ದ ಮಹತ್ವದ ದಾಖಲೆಗಳು, ಹಬ್ಬಕ್ಕೆ ಕೊಂಡೊಯ್ಯುತ್ತಿದ್ದ ವಸ್ತುಗಳೆಲ್ಲವೂ ಸುಟ್ಟು ಭಸ್ಮವಾಗಿದೆ.ವಸ್ತುಗಳನ್ನು ಕಳೆದುಕೊಂಡ ಪ್ರಯಾಣಿಕರು ರಾಯಚೂರು ನಗರದ ಪಶ್ಚಿಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.