ಅಗ್ನಿ ಅವಘಡ: 200ಕ್ಕೂ ಹೆಚ್ಚು ಗಂಧದ ಮರಗಳು ಸುಟ್ಟು ಕರಕಲು, ರೈತ ಕಂಗಾಲು!

0
Spread the love

ಬಳ್ಳಾರಿ:- ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡಕ್ಕೆ 200ಕ್ಕೂ ಹೆಚ್ಚು ಶ್ರೀಗಂಧದ ಮರಗಳು ಸುಟ್ಟು ಕರಕಲಾದ ಘಟನೆ ಜರುಗಿದೆ.

Advertisement

ರೈತ ಚನ್ನಬಸಪ್ಪ ಎಂಬುವವರ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಚನ್ನಬಸಪ್ಪ ತನ್ನ 9 ಎಕರೆ ಜಮೀನಿನಲ್ಲಿ ಶ್ರೀಗಂಧ, ರಕ್ತಚಂದನ, ಪೇರಲೆ ಹಾಗೂ ಬಾಳೆ ಬೆಳೆದ್ದರು. ಚನ್ನಬಸಪ್ಪ ಅವರು 2018 ರಿಂದಲೇ ಸಸಿಗಳನ್ನ ಹಾಕಿ ಪೋಷಣೆ ಮಾಡುತ್ತಿದ್ದರು. ಇದೀಗ ಬೆಂಕಿ ತಗುಲಿ 200ಕ್ಕೂ ಅಧಿಕ ಮರಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಾಹಿತಿ ತಿಳಿದ ಕೂಡಲೇ ಚನ್ನಬಸಪ್ಪ ಕುಟುಂಬದೊಂದಿಗೆ ಜಮೀನಿಗೆ ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹೀಗಾಗಿ ಇನ್ನಷ್ಟು ಪ್ರಮಾಣದ ಹಾನಿ ತಪ್ಪಿದೆ. ಸದ್ಯ 200ಕ್ಕೂ ಹೆಚ್ಚು ಮರಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರೂ ನಷ್ಟ ಆಗಿದೆ.


Spread the love

LEAVE A REPLY

Please enter your comment!
Please enter your name here