ಚಲಿಸುತ್ತಿದ್ದ ಸಾರಿಗೆ ಬಸ್‌ʼನಲ್ಲಿ ಬೆಂಕಿ: ತಪ್ಪಿದ ಭಾರೀ ಅನಾಹುತ

0
Spread the love

ಶಿವಮೊಗ್ಗ: ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ KSRTC ಬಸ್‌ʼನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಸಾಗರ ಪಟ್ಟಣದಲ್ಲಿ ನಡೆದಿದೆ. ಬೆಂಗಳೂರಿಗೆ ಭಟ್ಕಳದಿಂದ ಹೊರಟಿದ್ದ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

Advertisement

ವಾಯುವ್ಯ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ. ರಸ್ತೆ ಮಧ್ಯೆದಲ್ಲೇ ಬಸ್ ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ 12 ಪ್ರಯಾಣಿಕರು ಸುರಕ್ಷಿತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.


Spread the love

LEAVE A REPLY

Please enter your comment!
Please enter your name here