ದಾವಣಗೆರೆ: ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ನಾಲ್ಕು ವಾಹನಗಳು ಭಸ್ಮವಾಗಿರುವ ಘಟನೆ ನಗರದ ಹಳೆ ಪಿ.ಬಿ. ರಸ್ತೆಯಲ್ಲಿರುವ LIC ಕಚೇರಿ ಸಮೀಪದ ಮಾರುತಿ ಗ್ಯಾರೇಜ್ನಲ್ಲಿ
ಅರುಣ್ ಅವರಿಗೆ ಸೇರಿದ ಗ್ಯಾರೇಜ್ ಆಗಿದ್ದು, ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಗ್ಯಾರೇಜ್ನಲ್ಲಿದ್ದ ಮೂರು ಕಾರುಗಳು ಹಾಗೂ ಒಂದು ಕ್ರೂಸರ್ ವಾಹನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

ಇನ್ನೂ ಘಟನೆ ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಶ್ರಮಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ತನಿಖೆ ಮುಂದುವರಿದಿದೆ.



