ಧಾರವಾಡ:- ಚಲಿಸುತ್ತಿದ್ದ ಚಿಗರಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿರುವ ಘಟನೆ ಧಾರವಾಡದ NTTF ಬಳಿ ಜರುಗಿದೆ.
ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಪ್ರಯಾಣಿಕರನ್ನ ಚಾಲಕ ಕೆಳಗೆ ಇಳಿಸಿದ್ದಾನೆ. ಈ ಮೂಲಕ ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ. ತಾಂತ್ರಿಕ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.



