HomeIndia Newsಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 4 ಸಾವು, 10 ಮಂದಿಗೆ ಗಾಯ

ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: 4 ಸಾವು, 10 ಮಂದಿಗೆ ಗಾಯ

For Dai;y Updates Join Our whatsapp Group

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಪಟ್ಟಣದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ದುರ್ಘಟನೆ ನವಿ ಮುಂಬೈನ ವಾಶಿ ಸೆಕ್ಟರ್ 14 ರಲ್ಲಿ ಇರುವ ರಹೇಜಾ ರೆಸಿಡೆನ್ಸಿ ಎಂಜಿಎಂ ಕಾಂಪ್ಲೆಕ್ಸ್ ಕಟ್ಟಡದಲ್ಲಿ ನಡೆದಿದೆ. ಸೋಮವಾರ ರಾತ್ರಿ 12:30ರ ಸುಮಾರಿಗೆ 10ನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ನಿಮಿಷಗಳಲ್ಲಿ ಅದು 11 ಮತ್ತು 12ನೇ ಮಹಡಿಗಳವರೆಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 6 ವರ್ಷದ ಬಾಲಕಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾಶಿಯ ಎರಡು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಬೆಂಕಿ ಅವಘಡದ ಕುರಿತು ಮಾಹಿತಿ ದೊರೆಯುತ್ತಿದ್ದಂತೆ 40 ಅಗ್ನಿಶಾಮಕ ದಳದ ಸಿಬ್ಬಂದಿ,

8 ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಮಂಗಳವಾರ ಬೆಳಗ್ಗೆ 4 ಗಂಟೆಯ ಸುಮಾರಿಗೆ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img