ದಾವಣಗೆರೆ:-ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿರುವ ಘಟನೆ ದಾವಣಗೆರೆಯಲ್ಲಿ ಜರುಗಿದೆ. ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು. ರೈಲು ದಾವಣಗೆರೆ ಸನಿಹ ಬಂದಾಗ, ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
Advertisement
ಕೂಡಲೇ ಎಚ್ಚೆತ್ತ ಸಿಬ್ಬಂದಿ ರೈಲನ್ನು ದಾವಣಗೆರೆಯಲ್ಲಿ ನಿಲ್ಲಿಸಿದ್ದಾರೆ. ರೈಲ್ವೇ ಪೊಲೀಸರು ಹಾಗೂ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸಿಬ್ಬಂದಿ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ವಂದೇ ಭಾರತ್ ರೈಲಿನಲ್ಲಿದ್ದ ಪ್ರಯಾಣಿಕರು, ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಗಳೂರಿಗೆ ತೆರಳಿದ್ದಾರೆ ಎನ್ನಲಾಗಿದೆ.