ಪ್ರಯಾಗ್ ರಾಜ್: ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 2 ಸಿಲಿಂಡರ್ ಗಳು ಸ್ಪೋಟಗೊಂಡ ಪರಿಣಾಮ ಹಲವು ಟೆಂಟ್ಗಳು ಸುಟ್ಟು ಭಸ್ಮವಾಗಿವೆ.
Advertisement
ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ 2 ಸಿಲಿಂಡರ್ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಟೆಂಟ್ಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿಬಿದ್ದ ಟೆಂಟ್ನಲ್ಲಿದ್ದ ಜನರನ್ನು ಸುರಕ್ಷತಾ ದೃಷ್ಟಿಯಿಂದ ಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು ನೋವಾಗಿರುವ ಬಗ್ಗೆ ಮಾಹಿತಿ ಬಂದಿಲ್ಲ. ಇನ್ನೂ ಮಹಾ ಕುಂಭದಲ್ಲಿ ಬೆಂಕಿ ನಂದಿಸುವ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಆಡಳಿಯ ಮಂಡಳಿಯು ರಕ್ಷಣಾ ಕ್ರಮ ಕೈಗೊಳ್ಳುವ ಜೊತೆಗೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲಿದೆ.