ಆಂಧ್ರಪ್ರದೇಶ:- ಪಟಾಕಿ ಸ್ಪೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, 6 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯಲ್ಲಿ ಜರುಗಿದೆ.
Advertisement
ಬೈಕ್ನಲ್ಲಿ ಪಟಾಕಿ ಸಾಗಿಸುವಾಗ ಈ ಅವಘಡ ಸಂಭವಿಸಿದೆ. ರಸ್ತೆಯ ಗುಂಡಿಗೆ ಬೈಕ್ ಇಳಿದಾಗ ಈರುಳ್ಳಿ ಪಟಾಕಿ ಕೆಳಗೆ ಬಿದ್ದಿದೆ. ಪರಿಣಾಮ ಕ್ಷಣದಲ್ಲೇ ಪಟಾಕಿ ಸ್ಫೋಟಗೊಂಡಿದೆ.
ಪಟಾಕಿ ಬ್ಲಾಸ್ಟ್ ಆದ ಪರಿಣಾಮ ಸುಧಾಕರ್ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೇ ರಸ್ತೆಯ ಪಕ್ಕದಲ್ಲಿ ನಿಂತುಕೊಂಡು ಮಾತಾಡುತ್ತಿದ್ದಾಗ ಆರು ಮಂದಿಗೆ ಗಾಯಗೊಂಡಿದ್ದಾರೆ.
ಇನ್ನೂ ಪಟಾಕಿ ಸ್ಫೋಟಗೊಂಡ ದೃಶ್ಯ ಸಿಸಿಟಿವಿಯಲ್ಲಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.