ಬೆಂಗಳೂರು: ಬೆಂಗಳೂರಿನಲ್ಲಿ ಉದ್ಯಮಿಯ ಮೇಲೆ ಏರ್ ಗನ್ ನಿಂದ ಫೈರಿಂಗ್ ನಡೆದಿದೆ. ಬಸವನಗುಡಿಯ ಕೃಷ್ಣರಾವ್ ಪಾರ್ಕ್ ನಲ್ಲಿ ಘಟನೆ ನಡೆದಿದ್ದು, ನರ್ತಕಿ ಹಾಗೂ ಕಾರ್ಗಿಲ್ ಬಾರ್ ನ ಮಾಲೀಕ ರಾಜಗೋಪಾಲ್ ಮೇಲೆ ಫೈರಿಂಗ್ ಮಾಡಲಾಗಿದೆ. ಇನ್ನೂ ಈ ಘಟನೆ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಅಫ್ಜಲ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಈಗ ಅಫ್ಜಲ್‌ನನ್ನು ಬಂಧಿಸಿ ಬಸವನಗುಡಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ಬ್ಯುಸಿನೆಸ್ ಹೊಂದಿರೋ ಉದ್ಯಮಿ ರಾಜಗೋಪಾಲ್, ನರ್ತಕಿ ಬಾರ್, ಮೆಜೆಸ್ಟಿಕ್ ಸುತ್ತಮುತ್ತ ಅಂಗಡಿಗಳನ್ನು ಬಾಡಿಗೆಗೆ ಕೊಟ್ಟಿದ್ರು.
ಬಸವನಗುಡಿ ಕೃಷ್ಣರಾವ್ ಪಾರ್ಕ್ ಗೆ ಸ್ನೇಹಿತರ ಭೇಟಿಯಾಗಲು ರಾಜ್ ಗೋಪಾಲ್ ಬಂದಿದ್ದರು. ಈ ವೇಳೆ ಪಾರ್ಕ್ ನಲ್ಲಿ ವಾಕ್ ಮಾಡುತ್ತಿರುವಾಗಲೇ ಗನ್ ಫೈರ್ ಆಗಿದೆ. ಗಾಯಗೊಂಡ ಉದ್ಯಮಿ ರಾಜಗೋಪಾಲ್ ಜಯನಗರದ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಾನು ಕಾನೂನು ಪದವಿ ಓದುತ್ತಿದ್ದೇನೆ. ಮನೆಯಲ್ಲಿ ಏರ್‌ಗನ್‌ನಿಂದ ಶೂಟಿಂಗ್ ಅಭ್ಯಾಸ ಮಾಡುತ್ತಿದ್ದೇನೆ. ಅಭ್ಯಾಸ ಮಾಡುತ್ತಿದ್ದಾಗ ಗುರಿ ತಪ್ಪಿ ಕಿಟಕಿಯಿಂದ ಹೊರ ಹೋಗಿದೆ ಎಂದು ಅಫ್ಜಲ್ ಹೇಳಿದ್ದಾನೆ.



