ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್: ಕೂದಲೆಳೆ ಅಂತರದಲ್ಲಿ ಪಾರು!

0
Spread the love

ರಾಮನಗರ:- ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ನಡೆದಿರುವ ಘಟನೆ ರಾಮನಗರ ತಾಲೂಕಿನ ಬಿಡದಿ ಮನೆ ಬಳಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಜರುಗಿದೆ.

Advertisement

ಹೌದು, ಮಾಜಿ ಡಾನ್​​ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಅವರು, ತಮ್ಮ ಫಾರ್ಚ್ಯೂನರ್​ ಕಾರಲ್ಲಿ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಜರುಗಿದೆ. ರಿಕ್ಕಿ ರೈ, ಪ್ರತಿ ಬಾರಿ ತಾವೇ ಕಾರು ಚಲಾಯಿಸುತ್ತಿದ್ದರು. ಆದರೆ ತಡರಾತ್ರಿ ಅದ್ಯಾವ ಕಾರಣವೋ ಗೊತ್ತಿಲ್ಲ ತನ್ನ ಬದಲು ಡ್ರೈವರ್​ಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು, ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಕಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.​ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಯುತ್ತಿದೆ.


Spread the love

LEAVE A REPLY

Please enter your comment!
Please enter your name here