ಬೆಳಗಾವಿ: ಇಡೀ ಜಗತ್ತನ್ನೇ ಬಿಟ್ಟೂ ಬಿಡದೆ ಕಾದಿದ್ದ ಮಹಾಮಾರಿ ಕೊರೋನಾ ಮತ್ತೆ ತನ್ನ ಆರ್ಭಟ ಮುಂದುವರೆಸುವ ಮುನ್ಸೂಚನೆ ನೀಡಿದ್ದು, ಇದೀಗ ಕೊರೋನಾ ಸೋಂಕಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದೆ.
Advertisement
ಬೆಳಗಾವಿ ತಾಲೂಕಿನ 70 ವರ್ಷದ ರೋಗಿ ಕೊರೊನಾದಿಂದ ಮೃತಪಟ್ಟಿದ್ದಾರೆ. ರೋಗಿಯು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಪತ್ತೆಯಾಗಿತ್ತು. ಬಳಿಕ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ರೋಗಿಗೆ ಬುಧವಾರವಷ್ಟೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಪಾಸಿಟಿವ್ ಅಂತಾ ಗೊತ್ತಾದ ತಕ್ಷಣವೇ ರೋಗಿಯನ್ನು ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು.
ಇವರು ವಯೋಸಹಜ ಕಾಯಿಲೆಯಿಂದಲೂ ಬಳಲುತ್ತಿದ್ದರು. ತಡರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ರೋಗಿಯ ಕುಟುಂಬಸ್ಥರು ಕೋವಿಡ್ ನಿಯಮಾವಳಿಯ ಪ್ರಕಾರ ರಾತ್ರಿಯೇ ಅಂತ್ಯಸಂಸ್ಕಾರ ಮಾಡಿದ್ದಾರೆ.