ನಟಿ ರಶ್ಮಿಕಾ ಮಂದಣ್ಣ ನಟನೆಯ ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗುತ್ತಿವೆ. ಬಾಕ್ಸ್ ಆಫೀಸ್ ರಾಣಿಯಾಗಿ ಮೆರೆಯುತ್ತಿರುವ ರಶ್ಮಿಕಾ ಮಂದಣ್ಣ ನಟನೆಯ ಮತ್ತೊಂದು ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಇದುವರೆಗೂ ರೊಮ್ಯಾಂಟಿಕ್ ಹುಡುಗಿಯಾಗಿ, ಡಿ ಗ್ಲಾಮ್ ಲುಕ್ ಮೂಲಕ ಕಾಣಿಸಿಕೊಂಡಿದ್ದ ರಶ್ಮಿಕಾ ಇದೇ ಮೊದಲ ಭಾರಿಗೆ ಹಾರರ್ ಕಾಮಿಡಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ನಟನೆಯ ‘ಥಮ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ ಕೂಡ ನಟಿಸಿದ್ದು ಚಿತ್ರ ದೀಪಾವಳಿಗೆ ಬಿಡುಗಡೆ ಆಗಲಿದೆ.
ಸದ್ಯ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ರಶ್ಮಿಕಾ ಲುಕ್ ಗಮನ ಸೆಳೆಯುತ್ತಿದೆ. ಆಯುಷ್ಮಾನ್ ಖುರಾನಾ ಅವರು ಅಲೋಕ್ ಆಗಿ ಕಾಣಿಸಿಕೊಂಡಿದ್ದಾರೆ. ‘ಮಾನವೀಯತೆಯ ಕೊನೆಯ ಭರವಸೆ’ ಎಂದು ಇವರ ಪೋಸ್ಟರ್ ಮೇಲೆ ಬರೆಯಲಾಗಿದೆ. ರಶ್ಮಿಕಾ ಮಂದಣ್ಣ ಅವರು ತಡಾಕಾ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಆದಿತ್ಯ ಸರ್ಪೋತ್ದಾರ್ ನಿರ್ದೇಶನ ಮಾಡಿರುವ ಥಮ ಸಿನಿಮಾವನ್ನು ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣ ಮಾಡಿದೆ.