ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ವಿಭಾಗವು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಆಚರಣೆ ನಿಮಿತ್ತ ಆಯೋಜಿಸಿದ್ದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಮತ್ತು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಸಮ್ಮೇಳನದಲ್ಲಿ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಬಿ.ಎ 2ನೇ ಸೆಮಿಸ್ಟರ್ ವಿದ್ಯಾರ್ಥಿನಿ ರಂಜಿತಾ ದೇವಪ್ಪ ಕಡಿಯವರ ಕ್ರಾಂತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಗೌರವ ಪ್ರಶಸ್ತಿ ಪತ್ರದೊಂದಿಗೆ 3ಸಾವಿರ ರೂಪಾಯಿ ನಗದು ಬಹುಮಾನಕ್ಕೆ ಪಾತ್ರಳಾಗಿರುವ ಈಕೆಯ ಸಾಧನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪ್ರಶಂಸಿದ್ದಾರೆ.
ಕಾಲೇಜಿನ ಎನ್.ಎಸ್.ಎಸ್. ಘಟಕದ ಉತ್ತಮ ಸ್ವಯಂ ಸೇವಕಿಯಾಗಿರುವ ಈಕೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಧಾ ಕೌಜಗೇರಿ, ಎನ್.ಎಸ್.ಎಸ್. ಘಟಕದ ಸಂಯೋಜಕ ಡಾ. ಅಪ್ಪಣ್ಣ ಹಂಜೆ ಸೇರಿದಂತೆ ಸಮಸ್ತ ಬೋಧಕರು, ಬೋಧಕೇತರ ಸಿಬ್ಬಂದಿಗಳು ವಿಶೇಷವಾಗಿ ಗೌರವಿಸಿ ಸನ್ಮಾನಿಸಿದ್ದಾರೆ.