HomeKarnataka Newsಉತ್ತರ ಕನ್ನಡದಲ್ಲಿ ಹಂದಿಜ್ವರಕ್ಕೆ ಮೊದಲ ಬಲಿ: ಆರೋಗ್ಯ ಇಲಾಖೆ ಕಟ್ಟೆಚ್ಚರ!

ಉತ್ತರ ಕನ್ನಡದಲ್ಲಿ ಹಂದಿಜ್ವರಕ್ಕೆ ಮೊದಲ ಬಲಿ: ಆರೋಗ್ಯ ಇಲಾಖೆ ಕಟ್ಟೆಚ್ಚರ!

For Dai;y Updates Join Our whatsapp Group

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ಹಂದಿಜ್ವರ ಸೋಂಕಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ವರದಿಯಾಗಿದೆ.

ಮೃತರನ್ನು ಚವತ್ತಿ ಗ್ರಾಮದ ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂನ್ 8ರಂದು ಅಸ್ವಸ್ಥಗೊಂಡಿದ್ದ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿರಸಿಯ ಮಾರಿಕಾಂಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದಾಗ್ಯೂ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನೆಯು ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಜ್ವರ, ಕೆಮ್ಮು, ನೆಗಡಿ, ಮೈಕೈ ನೋವು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ಅತಿಯಾದ ಸುಸ್ತು ಕಾಣಿಸಿಕೊಂಡಲ್ಲಿ ತಕ್ಷಣವೇ ಸಮೀಪದ ಸರ್ಕಾರಿ ಅಥವಾ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ತಪಾಸಣೆ ಹಾಗೂ ಚಿಕಿತ್ಸೆ ಪಡೆಯುವಂತೆ ಇಲಾಖೆ ಮನವಿ ಮಾಡಿದೆ.

ತೀವ್ರ ಉಸಿರಾಟದ ತೊಂದರೆ, ಎದೆನೋವು, ನಿರ್ಜಲೀಕರಣ ಅಥವಾ ಗೊಂದಲದಂತಹ ಲಕ್ಷಣಗಳು ಕಂಡುಬಂದರೆ ತುರ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ವೈದ್ಯರು ತಿಳಿಸಿದ್ದಾರೆ.

ಹಂದಿಜ್ವರವು ಹೆಚ್1ಎನ್1 ವೈರಸ್‌ನಿಂದ ಉಂಟಾಗುವ ಸೋಂಕು ಕಾಯಿಲೆಯಾಗಿದ್ದು, ಸೋಂಕಿತ ವ್ಯಕ್ತಿ ಕೆಮ್ಮಿದಾಗ ಅಥವಾ ಸೀನಿದಾಗ ಗಾಳಿಯ ಮೂಲಕ ಹರಡುತ್ತದೆ. ಅಲ್ಲದೆ ವೈರಸ್ ತಗುಲಿರುವ ವಸ್ತುಗಳನ್ನು ಮುಟ್ಟಿದ ಬಳಿಕ ಕಣ್ಣು, ಮೂಗು ಅಥವಾ ಬಾಯಿಯನ್ನು ಸ್ಪರ್ಶಿಸುವುದರಿಂದಲೂ ಸೋಂಕು ಹರಡುವ ಸಾಧ್ಯತೆ ಇದೆ.

ಆದ್ದರಿಂದ ವೈಯಕ್ತಿಕ ಸ್ವಚ್ಛತೆ ಕಾಪಾಡುವುದು, ಕೆಮ್ಮು-ಸೀನುವ ವೇಳೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ಆರೋಗ್ಯ ಸಮಸ್ಯೆಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುವ ಮೂಲಕ ಹೆಚ್1ಎನ್1 ಸೋಂಕಿನಿಂದ ದೂರ ಉಳಿಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img