HomeBengaluru Newsಬೆಂಗಳೂರು ನಗರದಲ್ಲಿ ನಕಲಿ ಬ್ರಾಂಡೆಡ್ ವಾಚ್ ಮಾರಾಟ: ಸಿಸಿಬಿ ಪೊಲೀಸರಿಂದ ಐವರ ಬಂಧನ

ಬೆಂಗಳೂರು ನಗರದಲ್ಲಿ ನಕಲಿ ಬ್ರಾಂಡೆಡ್ ವಾಚ್ ಮಾರಾಟ: ಸಿಸಿಬಿ ಪೊಲೀಸರಿಂದ ಐವರ ಬಂಧನ

For Dai;y Updates Join Our whatsapp Group

Spread the love

ಬೆಂಗಳೂರು: ಬೆಂಗಳೂರು ನಗರದಲ್ಲಿ ಪ್ರಸಿದ್ಧ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ಗಡಿಯಾರಗಳನ್ನು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ ದಾಳಿ ವ್ಯಾಪಕವಾಗಿ ನಡೆದಿದ್ದು, ಸುಮಾರು 25 ಲಕ್ಷ ರೂ. ಮೌಲ್ಯದ ನಕಲಿ ವಸ್ತುಗಳನ್ನು ವಶಪಡಿಸಲಾಗಿದೆ.

ಬಂಧಿತ ಆರೋಪಿಗಳನ್ನು ಹರೀಶ್ ಕುಮಾರ್, ಸಯ್ಯದ್ ಜೈಸಾದ್ ಇಕ್ಬಾಲ್, ಮೊಹಮ್ಮದ್ ಹಬೀಬ್ ಹುಸೈನ್, ಖಲೀಮ್ ಉಲ್ಲಾ ಮತ್ತು ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಇವರು ಆರ್‌ಟಿ ನಗರ, ಗಂಗಾನಗರ ಮತ್ತು ಚಿಕ್ಕಪೇಟೆ ಪ್ರದೇಶಗಳಲ್ಲಿ ಅಂಗಡಿಗಳನ್ನು ನಡೆಸುತ್ತಿದ್ದರು.

ಆರೋಪಿಗಳು ಗ್ರಾಹಕರನ್ನು ಕಡಿಮೆ ಬೆಲೆಯಲ್ಲಿ, “ಆಫರ್ ರೇಟ್”ನಲ್ಲಿ ಗಡಿಯಾರಗಳನ್ನು ನೀಡುತ್ತಿದ್ದರು. ಆದರೆ, ಮೂಲ ಬ್ರಾಂಡ್ ಉತ್ಪನ್ನಗಳೇ ಎಂದು ನಂಬಿಸಿ ಮಾರಾಟ ಮಾಡಲಾಗುತ್ತಿತ್ತು.

ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ಐದು ಅಂಗಡಿಗಳ ಮೇಲೆ ದಾಳಿ ನಡೆಸಿ, ಒಟ್ಟು 670 ನಕಲಿ ಗಡಿಯಾರಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!