ನವದೆಹಲಿ:- ಕೆಂಪು ಕೋಟೆಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ ಐವರು ಬಾಂಗ್ಲಾ ಪ್ರಜೆಗಳನ್ನು ದೆಹಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನ ಬಳಿ ಆ ಪ್ರದೇಶದಲ್ಲಿ ನಿಯೋಜಿಸಲಾದ ಪೊಲೀಸ್ ತಂಡವು ಆರೋಪಿಗಳನ್ನು ವಿಚಾರಿಸಿ ಬಂಧಿಸಿದೆ. 20 ರಿಂದ 25 ವರ್ಷ ವಯಸ್ಸಿನ ಇಬ್ಬರು ಆರೋಪಿಗಳು ನಿಯಮಿತ ತಪಾಸಣೆಯ ಸಮಯದಲ್ಲಿ ಸರಿಯಾದ ದಾಖಲೆಗಳನ್ನ ತೋರಿಸುವಲ್ಲಿ ವಿಫಲರಾಗಿದ್ದಾರೆ. ಹೆಚ್ಚಿನ ತಪಾಸಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಕಂಡು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಉಪ ಪೊಲೀಸ್ ಆಯುಕ್ತ ರಾಜ ಬಂಥಿಯಾ, ಇವರೆಲ್ಲರೂ ಅಕ್ರಮ ವಲಸಿಗರಾಗಿದ್ದು, ಅಕ್ರಮವಾಗಿ ಕೆಂಪು ಕೋಟೆ ಆವರಣಕ್ಕೆ ಪ್ರವೇಶಿಸಲು ಪ್ರಯತ್ನಿಸಿದ್ದರು. ಹೀಗಾಗಿ ಐವರು ಬಾಂಗ್ಲಾದೇಶದ ಪ್ರಜೆಗಳನ್ನ ಬಂಧಿಸಲಾಗಿದೆ ಎಂದಿದ್ದಾರೆ.