`ಪಂಚ ಗ್ಯಾರಂಟಿ-ನುಡಿದಂತೆ ನಡೆದಿದ್ದೇವೆ’

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ ಜಿಲ್ಲಾ ಮಟ್ಟದಲ್ಲಿ `ಪಂಚ ಗ್ಯಾರಂಟಿ-ನುಡಿದಂತೆ ನಡೆದಿದ್ದೇವೆ’ ಎಂಬ ಗದಗ ಜಿಲ್ಲೆಯ ಕಿರುಹೊತ್ತಿಗೆಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ನಗರದ ಮುಳಗುಂದ ನಾಕಾ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಎದುರಿನ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ ಅವರ ನೂತನ ಕಚೇರಿಯನ್ನು ಉದ್ಘಾಟಿಸಿದ ನಂತರ ಬಿಡುಗಡೆಗೊಳಿಸಿದರು.

Advertisement

ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನೀಲಮ್ಮ ಬೋಳನವರ, ಹೇಮಂತಗೌಡ ಪಾಟೀಲ, ಶರಣಪ್ಪ ಬೆಟಗೇರಿ, ಪಿ.ಬಿ. ಅಳಗವಾಡಿ, ದೀಪಕ ಲಮಾಣಿ, ಸದಸ್ಯರಾದ ರೂಪಾ ಅಂಗಡಿ, ಶಿವನಗೌಡ ಪಾಟೀಲ, ಶರೀಫ್ ಬಿಳಿಯಲಿ, ಬಸವರಾಜ ಬೆಳದಡಿ, ವಿವೇಕ ಯಾವಗಲ್, ದೇವಪ್ಪ ಮೋರನಾಳ, ಪುಲಕೇಶಗೌಡ ಪಾಟೀಲ, ವಿರೂಪಾಕ್ಷಪ್ಪ ಯಾರಸಿ, ಈಶಣ್ಣ ಹುಣಸಿಕಟ್ಟಿ, ರಾಜೀವ ಗೊಡಚಪ್ಪ ಕುಂಬ, ಗೀತಾ ಸುರೇಶ ಬೀರಣ್ಣವರ, ವೀರಯ್ಯ ಮಠಪತಿ, ಫಕ್ರುಸಾಬ ಚಿಕ್ಕಮಣ್ಣೂರ, ಆರ್.ಆರ್. ಗಡ್ಡದ್ದೇವರಮಠ, ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಸದಸ್ಯರುಗಳಾದ ಕೃಷ್ಣಗೌಡ ಎಚ್.ಪಾಟೀಲ, ಮೀನಾಕ್ಷಿ ಬೆನಕಣ್ಣವರ, ದೇವರಡ್ಡಿ ತಿರ್ಲಾಪುರ, ಶಂಭು ಎಸ್.ಕಾಳೆ, ರಮೇಶ ಹೊನ್ನಿನಾಯ್ಕರ್, ಭಾಷಾಸಾಬ ಮಲ್ಲಸಮುದ್ರ, ದಯಾನಂದ ಪವಾರ, ನಿಂಗಪ್ಪ ದೇಸಾಯಿ, ಸಂಗಮೇಶ ಕೆರಕಲಮಟ್ಟಿ, ಸಂಗಮೇಶ ಹಾದಿಮನಿ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಸಾವಿತ್ರಿ ಹೂಗಾರ ಸೇರಿದಂತೆ ಗದಗ ಜಿಲ್ಲಾ ಹಾಗೂ ತಾಲೂಕು ಪ್ರಾಧಿಕಾರದ ಸದಸ್ಯರು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಗಣ್ಯರು, ಹಿರಿಯರು, ಗ್ಯಾರಂಟಿ ಯೋಜನೆಯ ಸಂಬಂಧಿತ ಇಲಾಖಾ ಅಧಿಕಾರಿಗಳು, ಫಲಾನುಭವಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here