ಅಗ್ನಿ ಅವಘಡದಲ್ಲಿ ಐವರು ಸಾವು ಕೇಸ್: ಕಟ್ಟಡ ಮಾಲೀಕರು ಅರೆಸ್ಟ್!

0
Spread the love

ಬೆಂಗಳೂರು:– ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದ ಭೀಕರ ಅಗ್ನಿ ದುರಂತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Advertisement

ಬಾಲಕೃಷ್ಣ ಶೆಟ್ಟಿ ಮತ್ತು ಸಂದೀಪ್ ಶೆಟ್ಟಿ ಬಂಧಿತರು. ನಗರದ ಕೆಆರ್ ಪೇಟೆಯಲ್ಲಿ ಈ ಘಟನೆ ಜರುಗಿತ್ತು. ಕಟ್ಟಡದಲ್ಲಿ ಅಗ್ನಿ ಅವಘಡ ತಪ್ಪಿಸಲು ಸಾಮಾನ್ಯ ಸೇಫ್ಟಿ ಸಹ ಇರಲಿಲ್ಲ. ಈ ಕಾರಣಕ್ಕಾಗಿ ಕಟ್ಟಡದ ಮಾಲೀಕರನ್ನು ಬಂಧಿಸಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಕಾಯ್ ತಿಳಿಸಲಾಗಿದೆ.

ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಸಾವನ್ನಪ್ಪಿದ್ದರು. ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದರು.

ಅಗ್ನಿ ಅವಘಡದಲ್ಲಿ ಮೃತಪಟ್ಟ ಮದನ್ ಸಿಂಗ್ ಸಹೋದರ ಗೋಪಾಲ್ ಸಿಂಗ್ ದೂರಿನ ಅಧಾರದ ಮೇಲೆ ಎಫ್‍ಐಆರ್ ದಾಖಲಾಗಿದೆ. ಈ ಘಟನೆಗೆ ಇನ್ನೂ ನಿಖರ ಕಾರಣ ಗೊತ್ತಾಗಿಲ್ಲ. ನಿನ್ನೆ (ಆ.16) ರಕ್ಷಣಾ ಕಾರ್ಯಾಚರಣೆ ಸುಮಾರು 15 ಗಂಟೆಗಳ ಕಾಲ ನಡೆದಿದೆ. ಇಂದು ಘಟನಾ ಸ್ಥಳಕ್ಕೆ ಎಫ್‍ಎಸ್‍ಎಲ್ ಟೀಂ ತೆರಳಿ ಮಾಹಿತಿ ಕಲೆ ಹಾಕಲಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ.


Spread the love

LEAVE A REPLY

Please enter your comment!
Please enter your name here