ಬೀದರ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿ ಹಿಂದಿರುಗುತ್ತಿದ್ದ ವೇಳೆ, ಬಿಹಾರದ ಭೋಜಪುರ್ ಜಿಲ್ಲೆಯಲ್ಲಿ ಕಾರು ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಬೀದರ್ ಮೂಲದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅದಲ್ಲದೆ ಆರು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಒಂದೇ ಕುಟುಂಭದ 12 ಜನರು ಎರಡು ದಿನಗಳ ಹಿಂದೆ ಕ್ರೂಸರ್ ವಾಹನದಲ್ಲಿ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದರು.
ಉತ್ತರಪ್ರದೇಶದ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಶುಕ್ರವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಡಿಕ್ಕಿಯಾಗಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.