ಬಾಗಲಕೋಟೆ: RSS ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಮಾತನಾಡಿದ ಅವರು,
ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದರು.
ನಾನು ಆರೆಸ್ಸೆಸ್ ವಿರೋಧಿ. ರಾಷ್ಟ್ರೀಯ ಸವಯಂ ಸೇವಕ ಸಂಘ ರಿಜಿಸ್ಟರ್ ಆಗಿರುವ ಕಾಪಿ ತೋರಿಸಿ ಎಂದು ಅವಾಲು ಹಾಕಿರುವುದಲ್ಲದೆ, RSS ತೆಗೆದರೆ ಬಿಜೆಪಿನೇ ಇರಲ್ಲ ಎಂದಿದ್ದಾರೆ. ಆರೆಸ್ಸೆಸ್ ಚಟುವಟಿಕೆಗಳನ್ನ ನಿಮ್ಮ ಮನೆಯಲ್ಲಿ ಮಾಡಿಕೊಳ್ಳಿ ಅಂತಲೂ ತಿಳಿಸಿದ್ದಾರೆ.
ಇಂದು ರಾತ್ರಿ ನಡೆಯಲಿರುವ ಡಿನ್ನರ್ ಪಾರ್ಟಿಗೂ ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗಾಗ ಊಟ ನೀಡುತ್ತಿರುತ್ತೇನೆ. ಊಟದಲ್ಲಿ ಏನೂ ಸ್ಪೆಷಲ್ ಇಲ್ಲ. ಮಾಧ್ಯಮದವರಿಗೆ ಮತ್ತು ಬಿಜೆಪಿಯವರಿಗೆ ಮಾತ್ರ ವಿಶೇಷ ಎಂದು ತಿಳಿಸಿದರು.